ಹಾವೇರಿ: ಟಿಟಿ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ 13 ಜನ ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಬೆಳಗಿನ ಜಾವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬೆಳಗಾವಿಯ ಜಿಲ್ಲೆಯ ಚಿಂಚೋಳಿ ಮಾರಿಯಮ್ಮ ದೇವಿ ದರ್ಶನ ಪಡೆದು ವಾಪಾಸ್ ಆಗುತ್ತಿದ್ದ ಸಂದರ್ಭದಲ್ಲಿ ಹಾವೇರಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯಲ್ಲಿ ನಿಂತಿದ್ದ ಲಾರಿಗೆ ಅತಿ ವೇಗವಾಗಿ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮ ಟಿಟಿ ವಾಹನ ಸಂಪೂರ್ಣ ಜಖಂಗೊಂಡಿದೆ. ಪರಿಣಾಮ ಅಪಘಾತದಲ್ಲಿ ೧೩ ಜನ ಪ್ರಯಾಣಿಕರು ಸಾವನ್ನಪ್ಪಿದ್ದು, ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, 15 ಕ್ಕೂ ಹೆಚ್ಚು ಪ್ರಯಾಣಿಕರಿದ್ದರೆಂದು ತಿಳಿದು ಬಂದಿದೆ.
ಪರಶುರಾಮ, ಭಾಗ್ಯ, ನಾಗೇಶ್, ವಿಶಾಲಾಕ್ಷಿ, ಅರ್ಪಿತಾ, ಸಭದ್ರಾಬಾಯಿ, ಆದರ್ಶ, ಮಾನಸ, ರೂಪ, ಮಂಜುಳಾ, ವಾಹನ ಚಾಲಕ ಹಾಗೂ ಅವಳಿ ಮಕ್ಕಳು ಸೇರಿ 13 ಪ್ರಯಾಣಿಕರು ಅಪಘಾತದಲ್ಲಿ ಮೃತಪಟ್ಟಿದ್ದು, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದವರೆಂದು ತಿಳಿದು ಬಂದಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.
ಘಟನಾ ಸ್ಥಳಕ್ಕೆ ಹಾವೇರಿ ಎಸ್.ಪಿ ಅಂಶುಕುಮಾರ್ ಹಾಗೂ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಈ ಕುರಿತಂತೆ ಪ್ರಕರಣ ದಾಖಲಾಗಿದೆ.