ಹುಬ್ಬಳ್ಳಿ: ದೇವಸ್ಥಾನವೊಂದರ ಪೂಜಾರಿಗೆ ದುಷ್ಕರ್ಮಿಗಳು ಚಾಕುವಿಂದ ಬರ್ಬರವಾಗಿ ಇರಿದು ಹತ್ಯೆಗೈದ ಘಟನೆ ನಗರದ ಎಪಿಎಂಸಿ ಬಳಿಯ ಈಶ್ವರನಗರದಲ್ಲಿ ಇಂದು ಭಾನುವಾರ ನಡೆದಿದೆ.
ಇಲ್ಲಿನ ವೈಷ್ಣೋದೇವಿ ದೇವಸ್ಥಾನದಲ್ಲಿ ಪೂಜಾರಿಯಾಗಿದ್ದ ದೇವೇಂದ್ರಪ್ಪ ಹೊನ್ನಳಿ ಎಂಬವರು ಹತ್ಯೆಯಾಗಿದ್ದು, ಶವವನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ದುಷ್ಕರ್ಮಿಗಳು ಹತ್ಯೆಗೈದ್ದು ಪರಾರಿಯಾಗಿದ್ದು ಎನ್ನಲಾಗಿದ್ದು, ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.
ಮೂಲತಃ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಶ್ರೀ ದೇವಪ್ಪಜ್ಜಾ ಎಂದೇ ಪ್ರಸಿದ್ದಿ ಪಡೆದಿದ್ದ ಅವರು, ಶ್ರೀ ಸಿದ್ದಿ ಸುಕ್ಷೇತ್ರ ಶ್ರೀ ದಕ್ಷಿಣ ವೈಷ್ಣೋದೇವಿ ದೇವಸ್ಥಾನದಲ್ಲಿ ಪೂಜಾರಿಯಾಗಿ ಸೇವೆಗೈಯುತ್ತಿದ್ದ ಅವರು ಹುಬ್ಬಳ್ಳಿಯ ವಿದ್ಯಾನಗರದಲ್ಲಿ ವಾಸವಾಗಿದ್ದರು.
ಸ್ಥಳಕ್ಕೆ ಡಿಸಿಪಿ ಮಹಾಲಿಂಗಪ್ಪ ನಂದಗಾವಿ, ನವನಗರ ಎಪಿಎಂಸಿ ಠಾಣೆಯ ಇನ್ಸ್ಪೆಕ್ಟರ್ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.