ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯಲ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿ, ಬೈಕ್ ವಶಪಡಿಸಿಕೊಂಡಿದ್ದಾರೆ.
ತಾರಿಹಾಳ ಗ್ರಾಮದ ನಿವಾಸಿ ಅಬ್ದುಲ್ ಸಲೀಂ (20) ಎಂಬ ಯುವಕ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಗ್ರಾಮೀಣ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮುರಗೇಶ್ ಚೆನ್ನಣ್ಣನವರ್ ಅವರ ನೇತೃತ್ವದ ತಂಡ ಯುವಕನನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಂಡಿದ್ದಾರೆ.
ಮೊನ್ನೆಯಷ್ಟೆ ಧಾರವಾಡದಲ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಯುವಕ, ಯುವತಿಯನ್ನು ಬಂಧಿಸಿದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಂದು ಬೈಕ್ ವ್ಹೀಲಿಂಗ್ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತಂತೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆದಿದೆ.