ಧಾರವಾಡ: ವಿದ್ಯಾಕಾಶಿಯಲ್ಲಿ ವಿದ್ಯಾರ್ಥಿಗಳಿಂದ ಬ್ಲಾಕ್ಮೇಲ್ ಮಾಡುವ ಮೂಲಕ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನ ವಿದ್ಯಾರ್ಥಿಗಳನ್ನು ಬಂಧಿಸುವಲ್ಲಿ ಧಾರವಾಡ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಸಹಪಾಠಿಯೊಬ್ಬರ ಫೋಟೋಗಳನ್ನು ಡೌನ್ಲೋಡ್ ಮಾಡಿ ಅವುಗಳನ್ನು ಅಶ್ಲೀಲ್ ರೀತಿಯಲ್ಲಿ ಎಡಿಟ್ ಮಾಡಿ ಅಸಭ್ಯ ಪದಗಳ ಬಳಕೆ ಮಾಡಿಕೊಂಡು ಸಾಮಾಜಿಕ ಜಾಲತಾಣಗಳ ಟ್ರೊಲ್ ಪೇಜ್ ಗಳಿಗೆ ಅಪ್ಲೋಡ್ ಮಾಡಿದ್ದಾರೆ. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ ಪೋಸ್ಟ್ ಗಳನ್ನು ಡಿಲೀಟ್ ಮಾಡಲು ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. 10 ರಿಂದ 15 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದು, ಹಣಕೊಡದಿದ್ದರೇ ಇನ್ನಷ್ಟು ವೈರಲ್ ಮಾಡುವ ಬೆದರಿಕೆ ಹಾಕಿದ್ದು, ಈ ಕುರಿತು ಧಾರವಾಡ ಉಪನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರು ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಇನ್ನೂ ಸಹಪಾಠಿಗಳ ಜೊತೆಗೆ ಪೋಟೋ ಕ್ಲಿಕ್ಕಿಸಿಕೊಳ್ಳುವ ಮುನ್ನವೇ ಯುವಕ, ಯುವತಿಯರು ಸ್ವಲ್ಪ ಎಚ್ಚರ ವಹಿಸಬೇಕಿದೆ. ಅಲ್ಲದೇ ಸೊಶೀಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗುವ ಮುನ್ನ ಸೊಸೈಟಿಯಲ್ಲಿ ನಮ್ಮ ಗೌರವದ ಬಗ್ಗೆಯೂ ಜಾಗೃತರಾಗುವುದು ಅನಿವಾರ್ಯವಾಗಿದೆ. ಸಹಪಾಠಿಗಳ ಸಹವಾಸವೇ ಈಗ ಪೊಲೀಸ್ ಠಾಣೆಯ ಮೆಟ್ಟಿಲೇರುವಂತೆ ಮಾಡಿರುವುದು ವಿಪರ್ಯಾಸಕರ ಸಂಗತಿಯಾಗಿದೆ.