ಹುಬ್ಬಳ್ಳಿ: ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಹರಿದ ಧ್ವಜ ಹಾರಾಡಾತ್ತಿದ್ದರೂ. ಸಹಿತ ಸಂಬಂಧಿಸಿದ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿ ಸಂದರ್ಭದಲ್ಲಿ ಧ್ವಜ ಬದಲಾವಣೆ ಮಾಡದೇ ಅಪಮಾನ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ತ್ರಿವರ್ಣ ಧ್ವಜ ಹರಿದರೂ ಕೂಡಾ ಸಂಬಂಧಿಸಿದ ಅಧಿಕಾರಿಗಳು ಕ್ಯಾರೆ ಎನ್ನದೆ ನಿಷ್ಕಾಳಜಿ ವಹಿಸಿದ್ದಾರೆ, ಈ ಮೂಲಕ ರಾಷ್ಟ್ರ ಧ್ವಜಕ್ಕೆ ಅಪಮಾನ ಎಸಗಿದ್ದು, ಅಧಿಕಾರಿಗಳ ನಡೆಗೆ ಸಾರ್ವಜನಿಕ ವಲಯದಲ್ಲಿ ಇದೀಗ ಆಕ್ರೋಶ ವ್ಯಕ್ತವಾಗಿದೆ.