ಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ವರೂರು ಗ್ರಾಮದ ಹತ್ತಿರ ಇಬ್ಬರು ಯುವಕರು ಪರಸ್ಪರ ಮಾರಕಾಸ್ತ್ರದಿಂದ ಒಬ್ಬರಿಗೊಬ್ಬರು ಹೊಡೆದಾಡಿಕೊಂಡ ಘಟನೆ ನಡೆಡಿದೆ.
ಅರಳಿಕಟ್ಟಿ ಗ್ರಾಮದ ಫಕ್ರುದ್ದೀನ್ ಹಾಗೂ ಜಾಫರ್ ಅನ್ನೋ ಯುವಕರ ಮದ್ಯ ಜಗಳವಾಗಿ, ಅದು ವಿಕೋಪಕ್ಕೆ ಹೋಗಿ ಮಾರಕಾಸ್ತ್ರದಿಂದ ಹಲ್ಲೆ ಮಾಡಿಕೊಂಡ ಪರಿಣಾಮ ಜಾಫರ್ ನ ಬೆರಳು ಕಟ್ಟಾಗಿ ಫಕ್ರುದ್ದೀನ್ ಮುಖದ ಬಾಗಕ್ಕೆ ಗಂಭೀರವಾಗಿ ಗಾಯಗಳಾಗಿದ್ದು ಇವರುಗಳನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಿಮ್ಸ್ ಆಸ್ಪತ್ರೆಗೆ ಧಾರವಾಡ ಪೋಲಿಸ್ ಹೆಚ್ಚುವರಿ ವರಿಷ್ಠಾಧಿಕಾರಿ ನಾರಾಯಣ್ ಭರಮಣಿ ಹಾಗೂ ಗ್ರಾಮೀಣ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣನವರ್ ಬೇಟಿ ನೀಡಿ ಮಾಹಿತಿಯನ್ನು ಪಡೆಯುತ್ತಿದ್ದಾರೆ. ಈ ಕುರಿತು ಗ್ರಾಮೀಣ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.