ಧಾರವಾಡ: ಲಾರಿಯೊಂದಕ್ಕೆ ಹಿಂಬದಿಯಿಂದ ಬಂದ ಟೆಂಪೋ ಟ್ರಾವೆಲ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತೆಗೂರ್ ಬಳಿ ಇರುವ ಮುಲ್ಲಾ ಧಾಬಾ ಹತ್ತಿರ ತಡರಾತ್ರಿ ನಡೆದಿದೆ.
ಬೆಳಗಾವಿ ಕಡೆಯಿಂದ ಪ್ರಯಾಣಿಕರನ್ನು ಕರೆದುಕೊಂಡು ದಾವಣಗೆರೆಗೆ ಹೋಗುತಿದ್ದ ಟೆಂಪೋ ಟ್ರಾವೆಲ್ ವಾಹನ ಮುಲ್ಲಾ ಧಾಬಾ ಹತ್ತಿರ ರಸ್ತೆ ಪಕ್ಕಕ್ಕೆ ನಿಲ್ಲಿಸಿದ ಟ್ರಕ್ ಹಿಂಬದಿಗೆ ಗುದ್ದಿದ ಪರಿಣಾಮ ವಾಹನದಲ್ಲಿದ್ದ ಡ್ರೈವರ್ ಹಾಗೂ ಓರ್ವ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಇನ್ನುಳಿದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಸ್ಥಳದಲ್ಲಿ ಇದ್ದ ಸಾರ್ವಜನಿಕರ ಸಹಾಯದಿಂದ ಗಾಯಗೊಂಡವರನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಕುರಿತು ಗರಗ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.