ಹುಬ್ಬಳ್ಳಿ: ಬ್ಯಾಂಕಿನಿಂದ ಹಣ ಡ್ರಾ ಮಾಡಿಕೊಂಡು ಬರುತ್ತಿದ್ದ ವ್ಯಕ್ತಿಯ ಗಮನವನ್ನು ಬೇರೆಡೆ ಸೆಳೆದ ದುಷ್ಕರ್ಮಿ, ಬ್ಯಾಗಿನಲ್ಲಿದ್ದ 50 ಸಾವಿರ ರೂ. ದೋಚಿ ಪರಾರಿಯಾಗಿದ್ದಾರೆ.
ಶುಕ್ರವಾರ 27 ರಂದು ಹುಬ್ಬಳ್ಳಿಯ ಘಂಟಿಕೇರಿ ಪೋಲಿಸ ಠಾಣೆ ವ್ಯಾಪ್ತಿಯಲ್ಲಿ ಬರುವ ಬಾರದಾನ್ ಗಲ್ಲಿಯಲ್ಲಿ ಈ ಘಟನೆ ನಡೆದಿದೆ. ಬ್ಯಾಂಕನಿಂದ ಹಣ ಡ್ರಾ ಮಾಡಿ ಹೊರಗಡೆ ಬಂದ ವ್ಯಕ್ತಿಯ ಗಮನ ಬೇರೆಡೆ ಸೆಳೆದು ಹಣದ ಬ್ಯಾಗ್ ಎತ್ತಿಕೊಂಡು ದುಷ್ಕರ್ಮಿ ಓಡಿ ಹೋಗಿದ್ದಾನೆ. ಹಣ ಕಳೆದುಕೊಂಡ ವ್ಯಕ್ತಿ ಘಂಟಿಕೇರಿ ಪೋಲಿಸ ಠಾಣೆಗೆ ತೆರಳಿ ನಡೆದ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾನೆ.
ಮಾಹಿತಿ ಪಡೆದ ಪೊಲೀಸರು ಕೆವಿಜಿ ಬ್ಯಾಂಕ್ ಶಾಖೆಗೆ ತೆರಳಿ ದುಷ್ಕರ್ಮಿಯ ಚಲನ ವಲನದದ ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲನೆ ಮಾಡಿದ್ದಾರೆ.
ಆದರೆ ಈ ಘಟನೆ ಕುರಿತು ಹಣ ಕಳೆದುಕೊಂಡವರು ಪೋಲಿಸ್ ಠಾಣೆಯಲ್ಲಿ ಯಾವುದೇ ರೀತಿ ದೂರು ದಾಖಲಿಸಿದೆ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.