ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಆಟೋ ಏಕಾಏಕಿ ಪಲ್ಟಿಯಾಗಿ ಚಾಲಕ ಮೃತಪಟ್ಟಿರುವ ಘಟನೆ ನಗರದ ಯಾಲಕ್ಕಿ ಶೆಟ್ಟರ್ ಕಾಲೊನಿ, ವಿಶಾಲ್ ಮಾರ್ಟ್ ಬಳಿ ನಡೆದಿದೆ.
ಮೃತಪಟ್ಟ ಆಟೋ ಚಾಲಕ ಧಾರವಾಡದ ಹತ್ತಿಕೊಳ್ ಮೈಲಾರಲಿಂಗ ನಗರ ನಿವಾಸಿ ಸಂಜೀವ್ ಶಿಂದೆ (48) ಎಂದು ಗುರುತಿಸಲಾಗಿದೆ.
ನಿಯಂತ್ರಣ ತಪ್ಪಿ ಏಕಾಏಕಿ ಆಟೋ ಪಲ್ಟಿಯಾಗಿದೆ. ಪರಿಣಾಮ ಚಾಲಕ ಸಂಜೀವ್ ಶಿಂದೆ ತಲೆಗೆ ಗಂಭೀರ ಗಾಯವಾಗಿ ರಕ್ತ ಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾರವಾಡ ಸಂಚಾರಿ ಠಾಣೆಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಬಗ್ಗೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.