ಧಾರವಾಡ: ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಓರ್ವ ಸ್ಥಳದಲ್ಲೇ ಸಾವಿಗೀಡಾದ ಘಟನೆ ತಡ ರಾತ್ರಿ ನಡೆದಿದೆ.
ಧಾರವಾಡ ನಗರದ ಸಾಧನಕೇರಿಯ ನಿವಾಸಿ ಸಚಿನ್ ಹನುಮಂತರಾವ್ ದೇಶಪಾಂಡೆ (48) ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಬೇಲೂರು ಇಂಡಸ್ಟ್ರಿಯ ಕ್ರಸ್ಟ್ ಸ್ಪೆಷಾಲಿಟಿ ರೇಸಿಂಗ್ ಕಂಪನಿಯಲ್ಲಿ ಕಾರ್ಯ ನಿರ್ವಹಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.
ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.