ಹುಬ್ಬಳ್ಳಿ: ಚನ್ನಪಟ್ಟಣ ಎನ್ ಡಿಎ ಟಿಕೆಟ್ ಗೊಂದಲ ತೀವ್ರಗೊಂಡಿದೆ. ಈ ನಡುವೆ ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಹೀಗಾಗಿ ಸಿಪಿ ಯೋಗೇಶ್ವರ ಇಂದು ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.