ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಬೆಂಗಳೂರಿನಲ್ಲಿ ದೊಡ್ಡ ಅನಾಹುತ ಸಂಭವಿಸಿದೆ.ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಬಾಬುಸಾಬ್‌ಪಾಳ್ಯದಲ್ಲಿ ನಿರ್ಮಾಣ ಕಟ್ಟಡ ಕುಸಿದಿದ್ದು ಮೂವರು ಮೃತಪಟ್ಟು 16 ಕಾರ್ಮಿಕರು ಕಟ್ಟಡದ ಒಳಗೆ ಸಿಲುಕಿರುವ ಅನುಮಾನ ವ್ಯಕ್ತವಾಗಿದೆ.
ಸಂಜೆನಾಲ್ಕು ಗಂಟೆ ನಂತರ ಈ ಕಟ್ಟಡ ಕುಸಿದಿದೆ. ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.ಹಲವು ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇನ್ನು ಕಟ್ಟಡ ಕುಸಿತ ಸ್ಥಳಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಬೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಇಂದು ಧಾರವಾಡದ ಪ್ರವಾಸದಲ್ಲಿದ್ದ ಸಚಿವರು ಧಾರವಾಡದಿಂದ ವಿಮಾನದ ಮೂಲಕ ಬೆಂಗಳೂರಿಗೆ ವಾಪಸಾಗಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.