ಆಘಾತಕಾರಿ ಘಟನೆಯೊಂದರಲ್ಲಿ, ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಿಂದ ಇಬ್ಬರು ಮಕ್ಕಳಾದ ಸ್ವಸ್ತಿ ವಿಜಯ್ ದೇಸಾಯಿ (4) ಮತ್ತು ವಿಯೋಮ್ ವಿಜಯ್ ದೇಸಾಯಿ (3) ಅವರನ್ನು ಅಪಹರಿಸಲಾಗಿದೆ. ಸ್ವಿಫ್ಟ್ ಕಾರಿನಲ್ಲಿ ಬಂದ ಅಪಹರಣಕಾರರು ಮನೆಗೆ ನುಗ್ಗಿ ಮಕ್ಕಳನ್ನು ಕರೆದುಕೊಂಡು ಹೋಗಿದ್ದಾರೆ.
ಅಥಣಿ ಪಟ್ಟಣದ ಸ್ವಾಮಿ ಪ್ಲಾಟ್ನಲ್ಲಿ ಈ ಘಟನೆ ನಡೆದಿದೆ. ಸ್ಥಳೀಯರು ಆಘಾತಕ್ಕೊಳಗಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಿಸಿಟಿವಿ ಕ್ಯಾಮೆರಾದಲ್ಲಿ ಇಬ್ಬರು ಆರೋಪಿಗಳ ಚಿತ್ರ ಸೆರೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.