ನವದೆಹಲಿ: ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮತ್ತೆ ಮರಳಿ ಮಾತೃ ಪಕ್ಷ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕೇಂದ್ರ ಸಚಿವ ಭುಪೇಂದ್ರ ಯಾದವ್, ರಾಜೀವ್ ಚಂದ್ರಶೇಖರ್ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.