ಹುಬ್ಬಳ್ಳಿ; ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನಡೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಚೆನ್ನಮ್ಮ ವೃತ್ತದಲ್ಲಿ ಸಿಹಿ ಹಂಚುವ ಮೂಲಕ ವಿಭಿನ್ನ ಪ್ರತಿಭಟನೆ ನಡೆಸಿದರು.
ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಜಗದೀಶ್ ಶೆಟ್ಟರ್ ವಿರುದ್ಧ ಘೋಷಣೆ ಹೋಯ್ತು ಹೋಯ್ತು ಪೀಡೆ ಹೋಯ್ತು ಅಂತ ಘೋಷಣೆ ಕೂಗಿ ಸಿಹಿ ಹಂಚುವ ಮೂಲಕ ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.