ಹುಬ್ಬಳ್ಳಿ: ಕಲಬುರ್ಗಿ ಜಿಲ್ಲೆಯ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯನ್ನು ಅಶುದ್ಧಗೊಳಿಸಿರುವುದನ್ನು ಖಂಡಿಸಿ ಹಳೇ ಹುಬ್ಬಳ್ಳಿಯಲ್ಲಿ ಗುರುವಾರ ವಿವಿಧ ದಲಿತ ಸಂಘಟನೆಗಳ ಸದಸ್ಯರು ಕಾರವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಸಮತಾ ಸೇನೆ ಅಧ್ಯಕ್ಷ ಗುರುನಾಥ ಉಳ್ಳಿಕಾಶಿ ಮಾತನಾಡಿ, ಜಿಲ್ಲೆಯ ಕೋಟನೂರನಲ್ಲಿರುವ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಕೆಲ ಕಿಡಿಗೇಡಿಗಳು ಅವಮಾನ ಮಾಡಿ ಪಟಾಕಿ ತಮ್ಮ ವಿಕೃತ ಬುದ್ದಿ ಪ್ರದರ್ಶಿಸಿದ್ದು, ಇಂತಹ ವಿಕೃತ ಮನಸ್ಥಿತಿಯಲ್ಲಿ ಇನ್ನೂ ಬದುಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಡಳಿತವು ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ರಕ್ಷಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ, ನಾಲ್ಕು ಜನ ಆರೋಪಿಗಳ ಬಂಧನ ಮಾಡಿದ್ದು, ಇನ್ನೂ ಒಬ್ಬನನ್ನು ಕೂಡಲೇ ಬಂಧನ ಮಾಡಬೇಕೆಂದು ಒತ್ತಾಯಿಸಿದರು.