ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಬಸವನಬಾಗೇವಾಡಿಯ ಸುನೀಲ ಭಜಂತ್ರಿ (23) ಎಂದು ಗುರುತಿಸಲಾಗಿದೆ. ಬಸವನಬಾಗೇವಾಡಿ ಪಟ್ಟಣದ ಎಪಿಎಂಸಿ ಹಿಂಭಾಗದ ಹೊರವಲಯಕ್ಕೆ ಕರೆದೊಯ್ದು ಎಣ್ಣೆ ಪಾರ್ಟಿ ಮಾಡಿ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಬೆರಳಚ್ಚು ತಜ್ಞರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಗುರುಶಾಂತ ದಾಶ್ಯಾಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸವನ ಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.