ಯುವಕನೋರ್ವನನ್ನು ಗುಂಡು ಹಾರಿಸಿ ಕೊಲೆಗೈದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ತಡರಾತ್ರಿ ಘಟನೆ.
ಹಲಸಿ ಗ್ರಾಮದ ಅಲ್ತಾಫ್ ಮಕಾಂದರ್ (30) ಕೊಲೆಯಾದ ಯುವಕ. ಘಟನಾ ಸ್ಥಳಕ್ಕೆ ಉತ್ತರ ವಲಯ ಐಜಿಪಿ ವಿಕಾಸ್ ಕುಮಾರ್, ಹೆಚ್ಚುವರಿ ಎಸ್ಪಿ ಶ್ರುತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗುಂಡಿನ ದಾಳಿಗೆ ನಿಖರ ಕಾರಣ ತಿಳಿದು ಬಂದಿಲ್ಲ, ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.