ಹುಬ್ಬಳ್ಳಿ: ಬೈಕ್ ಸವಾರನೊರ್ವನಿಗೆ ಲಾರಿಯೊಂದು ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗೋಕುಲರಸ್ತೆಯ ಇನ್ಫೋಸಿಸ್ ಬಳಿಯಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ತುಂಬ ಗ್ರಾಮದ ನಿವಾಸಿ ಸಂಗಯ್ಯ ಹಿರೇಮಠ (52) ಸಾವನ್ನಪ್ಪಿದ್ದು, ಈತ ಹುಬ್ಬಳ್ಳಿಯ ಕಾರ್ಮಿಕ ಇಲಾಖೆಯಲ್ಲಿ ಎಫ್ ಡಿ ಎ ಯಾಗಿ ಕರ್ತವ್ಯ ನಿರ್ವಹಿಸಿದ್ದರು, ಗುರುವಾರ ಕಣಿವೆ ಹೊನ್ನಾಪುರ ಗ್ರಾಮಕ್ಕೆ ಹೋಗುವ ಸಂದರ್ಭದಲ್ಲಿ ಲಾರಿ ಬೈಕ್’ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸಂಗಯ್ಯ ಹಿರೇಮಠ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಈ ಕುರಿತು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.