ಹುಬ್ಬಳ್ಳಿ:ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹಿರೇಹೊನ್ನಳ್ಳಿ ಗ್ರಾಮದ ಬಳಿ ಭಾನುವಾರ ತಡರಾತ್ರಿ ನಡೆದಿದೆ.

ಧಾರವಾಡದ ಮದಿಹಾಳ ನಿವಾಸಿ ಅರುಣ್ ಸಿಂಗ್ ಎಂಬಾತ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ. ಕಾರವಾರದಿಂದ ಮದುವೆ ಮುಗಿಸಿಕೊಂಡು ವಾಪಾಸ್ ಧಾರವಾಡದ ಕಡೆಗೆ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ನಡೆದಿದೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐವರ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಕಲಘಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.