ಹುಬ್ಬಳ್ಳಿ: ಆಸ್ತಿ ವಿಚಾರವಾಗಿ ಹೆತ್ತ ತಂದೆ-ತಾಯಿಯನ್ನೆ ಮಗ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಅಶೋಕ ಕೊಬ್ಬನ್ನವರ, ಶಾರವ್ವ ಕೊಬ್ಬನ್ನವರ ಎಂಬಾತರೇ ಸಾವನ್ನಪ್ಪಿದ್ದಾರೆ. ಮಗ ಗಂಗಾಧರ ಕೊಬ್ಬನ್ನವರ ಎಂಬಾತನೇ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.
ಘಟನಾ ಸ್ಥಳಕ್ಕೆ ಅಡಿಷನಲ್ ಎಸ್ ಪಿ ನಾರಾಯಣ್ ಭರಮಣಿ ಹಾಗೂ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣನವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಮೃತಪಟ್ಟವರನ್ನು ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಕೊಲೆ ಮಾಡಿ ಪರಾರಿಯಾಗಿರುವ ಗಂಗಾಧರ ಬಲೆಗೆ ಪೊಲೀಸರು ಜಾಲ ಬೀಸಿದ್ದಾರೆ.