ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನಲೆ ಕಣ್ಣಿಗೆ ಕಾರದ ಪುಡಿ ಎರಚಿ ವ್ಯಕ್ತಿಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿರುವ ಘಟನೆ ನಗರದ ಹೊರವಲಯ ಗಬ್ಬೂರನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಗಬ್ಬೂರಿನ ಮನೋಹರ ಚಾಕಲಬ್ಬಿ (35) ಮೇಲೆ ಹಲ್ಲೆ ಮಾಡಲಾಗಿದೆ. ಎಂದಿನಂತೆ ರಾತ್ರಿ ಮನೆಯಲ್ಲಿ ಊಟ ಮುಗಿಸಿಕೊಂಡು ಪಾನ್ ಶಾಪ ಹೋಗಲು ಹೊರಗೆ ಬಂದಾಗ ದುಷ್ಕರ್ಮಿಗಳು ಗುಂಪೊಂದು ಮನೋಹರ್ ಮೇಲೆ ಅಟ್ಯಾಕ್ ಮಾಡಿದೆ.

ಮಾರಕಾಸ್ತ್ರದಿಂದ ಹಲ್ಲೆಗೊಳಗಾದ ಮನೋಹರ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಸಂಬಂಧಿಕರು ಚಿಕಿತ್ಸೆಗೆ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಹಳೇ ದ್ವೇಷದ ಹಿನ್ನೆಲೆ ಮನೋಹರ್ ಮೇಲೆ ದಾಳಿ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದ್ದು, ಘಟನೆ ಕುರಿತಂತೆ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.