ಹುಬ್ಬಳ್ಳಿ: ಒನ್ ವೇ ನಲ್ಲಿ ಬಂದಂತಹ ದ್ವಿಚಕ್ರ ವಾಹನವನ್ನು ತಪ್ಪಿಸಲು ಹೋಗಿ ರಸ್ತೆ ಮಧ್ಯೆ ಇರುವ ಡಿವೈಡರ್ ಗೆ ಅಂಬುಲೆನ್ಸ್ ಡಿಕ್ಕಿ ಹೊಡೆದ ಘಟನೆ ನಗರದ ಪೊಲೀಸ್ ಆಯುಕ್ತರ ಕಛೇರಿ ಬಳಿಯಲ್ಲಿ ತಡರಾತ್ರಿ ನಡೆದಿದೆ.

ಅಂಬುಲೆನ್ಸ್ ನಲ್ಲಿ ರೋಗಿಯನ್ನು ಬಿಟ್ಟು ಬರುವ ವೇಳೆಯಲ್ಲಿ ಈ ಒಂದು ಅವಘಡ ನಡೆದಿದೆ. ಘಟನೆಯಿಂದಾಗಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಸ್ಥಳಕ್ಕೆ ಎಪಿಎಂಸಿ ನವನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.