ಹುಬ್ಬಳ್ಳಿ: 500 ರೂ. ಮುಖಬೆಲೆಯ ನೋಟ್ ನಲ್ಲಿ ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಫೋಟೋ ಅಳವಡಿಸಲು ವಿ.ಪ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿಯವರು ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಹಾಗೂ ಅರ್ಜುನ್ ರಾಮ್ ಮೇಘವಾಲ್ ಅವರಿಗೆ ಹುಬ್ಬಳ್ಳಿಯಲ್ಲಿ ಮನವಿ ಮಾಡಿದ್ದಾರೆ.
ಪ್ರಧಾನಮಂತ್ರಿ, ಹಣಕಾಸು ಮಂತ್ರಿ ಬಳಿ ನಮ್ಮ ಮನವಿ ತೆಗೆದುಕೊಳ್ಳಬೇಕು. ಏಪ್ರಿಲ್14 ರ ಒಳಗಾಗಿ 500 ರೂ. ಮುಖಬೆಲೆಯ ನೋಟ್ ಮೇಲೆ ಡಾ. ಅಂಬೇಡ್ಕರ್ ಅವರ ಫೋಟೋ ಹಾಕಬೇಕು ಎಂದು ಹುಬ್ಬಳ್ಳಿಯಲ್ಲಿ ನಡೆದ ಸಂವಿಧಾನ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಛಲವಾದಿ ನಾರಾಯಣಸ್ವಾಮಿ ಮನವಿ ಮಾಡಿದ್ದಾರೆ.