ಧಾರವಾಡ: ಬೈಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸಾವರನೋರ್ವ ಸಾವನ್ನಪ್ಪಿದ ಘಟನೆ ಇಂದು ಬೆಳಗಿನ ಜಾವ ಧಾರವಾಡ-ಅಳ್ನಾವರ ರಸ್ತೆಯಲ್ಲಿ ನಡೆದಿದೆ.

ಅಳ್ನಾವರ ನಿವಾಸಿ ಸಿದ್ದು ನಾಯಕ್ (32) ಎಂಬ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಅಪಘಾತ ನಡೆದ ಸಂದರ್ಭದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರರನ್ನು ಆಸ್ಪತ್ರೆಗೆ ದಾಖಲಿಸುವ ವೇಳೆಗೆ ಸಾವನ್ನಪ್ಪಿದ್ದಾನೆ.
ಈ ಕುರಿತಂತೆ ಅಳ್ನಾವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.