ಧಾರವಾಡ: ನಗರದ ಹೊಸ ಬಸ್ ನಿಲ್ದಾಣದಲ್ಲಿ ಇಂದು ಮಧ್ಯಾಹ್ನಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಪಾದಚಾರಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ ಘಟನೆ ನಡೆದಿದೆ.

ಬಸ್ ನಿಲ್ದಾಣದ ಒಳಗೆ ನಡೆದು ಹೋಗುತ್ತಿದ್ದಾಗ ಬಸ್ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯ ಮಾಹಿತಿ ತಿಳಿದುಬಂದಿಲ್ಲ.

ಘಟನಾ ಸ್ಥಳಕ್ಕೆ ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಬೇಟಿ ನೀಡಿ ಮೃತ ದೇಹವನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.