ಧಾರವಾಡ: ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ.

ಧಾರವಾಡ ಮದಿಹಾಳ ನಿವಾಸಿ ರವಿ ಹೊರಗಿನಮಠ್ ಮೃತ ವ್ಯಕ್ತಿ. ನುಗ್ಗಿಕೇರಿ ಹನುಮಂತನ ಗುಡಿಯ ಆವರಣದಲ್ಲಿ ತೆಂಗಿನಕಾಯಿ ವ್ಯಾಪಾರ ಮಾಡುತಿದ್ದರೆಂದು ತಿಳಿದುಬಂದಿದೆ. ವ್ಯಾಪಾರ ಮುಗಿಸಿಕೊಂಡು ತೆರಳುತ್ತಿದ್ದ ಸಂದರ್ಭದಲ್ಲಿ ಧಾರವಾಡದಿಂದ ತಳಸಿನಕೊಪ್ಪ ಗ್ರಾಮಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿ ಗಾಯಗೊಂಡು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಸದ್ಯ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.