ಹುಬ್ಬಳ್ಳಿ: ದಾಖಲೆ ಇಲ್ಲದ ಸಾಗಿಸುತ್ತಿದ್ದ 89.99 ಲಕ್ಷ ರೂ. ಹಣ ವಶಪಡಿಸಿಕೊಂಡ ಘಟನೆ ಕೇಶ್ವಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿಗಳಾದ ಪಾಂಡುರಂಗಪ್ಪ, ಕಮಲಾ ಮತ್ತು ಬಾಲಕೃಷ್ಣ ಎಂಬರಿಂದ ವಶಪಡಿಸಿಕೊಳ್ಳಲಾಗಿದೆ. ಕೇಶ್ವಾಪೂರ ನಗರದ ಪ್ರಮುಖ ರಸ್ತೆಯಲ್ಲಿ ಕಾರ್ ನಲ್ಲಿ ಸಾಗಾಟ ಮಾಡುತ್ತಿದ್ದ ಹಣವನ್ನು ಎಸಿಪಿ ಶಿವಪ್ರಕಾಶ್ ನಾಯ್ಕ್, ಇನ್ಸ್ಪೆಕ್ಟರ್ ಹಟ್ಟಿ, ಪಿಎಸ್ಐ ಬನ್ನಿಕೊಪ್ಪ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಹಣ ವಶಪಡಿಸಿಕೊಳ್ಳಲಾಗಿದೆ.
89.99 ಲಕ್ಷ ರೂ. ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಮೂವರ ಆರೋಪಿಗಳ ವಿರುದ್ಧ ಪೊಲೀಸರು ಕಾನೂನು ಕ್ರಮ ಜರುಗಿಸಿ, ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ.