ಹುಬ್ಬಳ್ಳಿ: ಚಲಿಸುತ್ತಿದ್ದ ಸಾರಿಗೆ ಬಸ್ ನ ಪಾಟಾ ಕಟ್ಟಾಗಿ ಬಸ್ ಪಟ್ಲಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ 15ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಬಳಿ ನಡೆದಿದೆ.

ಬ್ಯಾಹಟ್ಟಿ ಗ್ರಾಮದ ಬಳಿ ಏಕಾಏಕಿ ಬಸ್ ಪಾಟಾ ಕಟ್ ಆಗಿದೆ. ಇದರಿಂದಾಗಿ ನಿಯಂತ್ರಣ ಕಳೆದುಕೊಂಡು ಬಸ್ ಚಾಲಕ ಬಸ್ ನಿಯಂತ್ರಿಸಲು ಪ್ರಯತ್ನ ಮಾಡಿದರು ಸಹ ಸಾಧ್ಯವಾಗದೇ ಪಲ್ಟಿಹೊಡೆದಿದೆ. ಪಲ್ಟಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ 15ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇನ್ನು ಗಾಯಗೊಂಡ ಪ್ರಯಾಣಿಕರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಇನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.